ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ

(ನ್ಯೂಸ್ ಕಡಬ)newskadaba.com  ಹಜಾರಿಬಾಗ್, ಜು.18. ವ್ಯಕ್ತಿಯೊಬ್ಬರಿಂದ ಲಂಚ ಪಡೆದುಕೊಳ್ಳುತ್ತಿದ್ದ ಸರ್ಕಾರಿ ಅಧಿಕಾರಿಣಿಯೊಬ್ಬರನ್ನು ಜಾರ್ಖಂಡ್‌ ನ ಹಜಾರಿಬಾಗ್ ಭ್ರಷ್ಟಾಚಾರ ನಿಯಂತ್ರಣ ದಳ (ಎಸಿಬಿ) ರೆಡ್ ಹ್ಯಾಂಡ್ ಆಗಿ ಹಿಡಿದಿದೆ ಎಂದು ವರದಿಯಾಗಿದೆ.


ಬಂಧಿತ ಮಹಿಳಾ ಅಧಿಕಾರಿಯನ್ನು ಮಿಥಾಲಿ ಶರ್ಮಾ ಎಂದು ಗುರುತಿಸಲಾಗಿದ್ದು, ಎಂಟು ತಿಂಗಳ ಹಿಂದೆ ಜಾರ್ಖಂಡ್‌ನ ಕೊಡೆರ್ಮಾದಲ್ಲಿ ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ಆಗಿ ನಿಯೋಜನೆಗೊಂಡಿದ್ದರು. ಇದು ಅವರ ವೃತ್ತಿ ಜೀವನದ ಮೊದಲ ಪೋಸ್ಟಿಂಗ್ ಆಗಿದೆ ಎಂದು ತಿಳಿದುಬಂದಿದೆ.

Also Read  ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..!

 

error: Content is protected !!
Scroll to Top