ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com  ವಿಜಯವಾಡ, ಜು.18. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ‘ಮೋಜಿಗಾಗಿ’ ಉದ್ದೇಶಪೂರ್ವಕವಾಗಿ ಪದೇ ಪದೇ ವಿದ್ಯುತ್ ಶಾಕ್ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ ಎನ್ನಲಾಗಿದೆ.

ಈಡುಪುಗಲ್ಲು ಗ್ರಾಮದ ಜಿಲ್ಲಾ ಪರಿಷತ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಓರ್ವ ಬಾಲಕಿ ಪ್ರಜ್ಞೆ ತಪ್ಪಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Scroll to Top