(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. 2023ನೇ ವರ್ಷದಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ ಹಾಗೂ ಇಂಗ್ಲಿಷ್ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳನ್ನು ಸ್ವೀಕರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಈ ವಿಳಾಸಕ್ಕೆ ಇದೇ ಜು.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2441905, 2425873 ಅನ್ನು ಸಂಪರ್ಕಿಸುವಂತೆ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.