(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4ರನ್ವಯ 2018-19 ನೇ ಸೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ ಟ್ರಸ್ಟ್ ಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ “ಅರ್ಜಿ ನಮೂನೆ” (Form-I) ರಲ್ಲಿ ದಿನ ಜನವರಿ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು, ಜಂಟಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು, ಇವರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಉದ್ದೇಶಿಸಿ 2016-17 ಮತ್ತು 2017-18 ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಈ ಕಛೇರಿಗೆ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ / ಟ್ರಸ್ಟ್ ಗಳು, ಮತ್ತೊಮ್ಮೆ ಹಾಸದಾಗಿ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಮತ್ತೊಮ್ಮೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಆದರೆ ಇಂತಹ ಸಂಸ್ಥೆಗಳು 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುನ್ನು ಪ್ರಾರಂಭಿಸಲು ಇಚ್ಛಿಸಿದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಪ್ರಸ್ತುತ ಸಾಲಿನ ವೇಳಾಪಟ್ಟಿಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಛೇರಿಗೆ ಮನವಿಯನ್ನು ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ www.pue.kar.nic.in ನ್ನು ಸಂಪರ್ಕಿಸಬಹುದಾಗಿದೆ.