ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ.


ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.

Scroll to Top