ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಇಲ್ಲಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಖಾಲಿ ಸ್ಥಾನಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಸರ್ಕಾರಿ ಕೋಟದಲ್ಲಿ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇಂಡಸ್ಟ್ರಿಯಲ್ ರೋಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಕೋರ್ಸುಗಳಿಗೆ ಮತ್ತು ಮ್ಯಾನೇಜ್ಮೆಂಟ್ ಕೋಟದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿಗಳಲ್ಲಿ ಹಲವು ಖಾಲಿ ಸ್ಥಾನಗಳಿರುತ್ತವೆ.

ಅರ್ಹ ಅಭ್ಯರ್ಥಿಗಳು ಜುಲೈ 30ರೊಳಗೆ ನೇರವಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147 ಹಾಗೂ 9008017458 ಅನ್ನು ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

error: Content is protected !!
Scroll to Top