ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ಸಂಭವಿಸಿದೆ.

ಮೃತರನ್ನು ದಾಮೋದರ ಪುತ್ರಿ ಅಶ್ವತಿ(25) ಎಂದು ಗುರುತಿಸಲಾಗಿದೆ.

ಅಶ್ವಥಿಯವರ ಮೃತದೇಹ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ನಡೆದಿದೆ. ತಾಯಿ ಸುಜಾತರವರು ಮನೆ ಸಮೀಪದ ಬೀಡಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಬಡಿದರೂ ತೆರೆಯದಿದ್ದುದರಿಂದ ಪರಿಸರದ ಮನೆಯವರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದಿರುವುದು ಕಂಡು ಬಂದಿದೆ. ಅಶ್ವತಿ ಕಣ್ಣೂರಿನಲ್ಲಿ ವಸ್ತ್ರದಂಗಡಿಯಲ್ಲಿ ಕೆಲಸಕ್ಕಿದ್ದು, ಪತಿ ಮನೋಹರ್ ವಿದೇಶದಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ.

Also Read  ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ

error: Content is protected !!
Scroll to Top