ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ.

ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ ಪೊಲೀಸರು ಹುಡುಕಾಟ ಕಾರ್ಯಚರಣೆ ನಡೆಸಿದ್ದಾರೆ. ಸಮುದ್ರದ ಅಬ್ಬರದ ಅಲೆ ಇರುವುದರಿಂದ ಕಾರ್ಯಚರಣೆಗೆ ವಿಳಂಬವಾಗಿದೆ ಎನ್ನಲಾಗಿದೆ.

Also Read  ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಗೆ ಸೇರ್ಪಡೆ

 

error: Content is protected !!
Scroll to Top