ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ.

ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ ಚಿನ್ನಾಭರಣ ಹಾಗೂ 8,000 ರೂ. ನಗದು ಕಳ್ಳತನ ನಡೆಸಿ, ಮರುದಿನ ಕಾರ್ಮಿಕ ಊರಿಗೆ ತೆರಳಿದ್ದನು. ಇತ್ತ ಕಾರ್ಯಕ್ರಮದಿಂದ ಹಿಂತಿರುಗಿದ ಮನೆಯವರಿಗೆ ಚಿನ್ನ ಮತ್ತು ನಗದು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

Also Read  ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ...!!!

ಈ ಬಗ್ಗೆ ಮನೆಮಂದಿ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ ಕಾರ್ಮಿಕನ ಮನೆಗೆ ತೆರಳಿ ಊರಿನಲ್ಲಿದ್ದ ಆತನನ್ನು ಹಿಡಿದು, ಸುಬ್ರಹ್ಮಣ್ಯ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತ ಕಳವು ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top