ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ.


ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಕಾರ್ಮಿಕರು ಹೆದ್ದಾರಿಯ ಡಿವೈಡರ್ ನಡುವಿನ ಗಿಡಗಳ ಆರೈಕೆ ಕೆಲಸ ಮಾಡುತ್ತಿದ್ದಾಗ ರಕ್ಷಣೆಗಾಗಿ ಅಳವಡಿಸಿದ್ದ ಬ್ಯಾರಿಕೇಡ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ, ಬಳಿಕ ನಿಯಂತ್ರಣ ತಪ್ಪಿ ಕಾರ್ಮಿಕರಿಗೆ ಢಿಕ್ಕಿಯಾಗಿ, ಬಳಿಕ ಟ್ಯಾಕ್ಟರ್‌ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟೆಂಪೋದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

error: Content is protected !!
Scroll to Top