ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಟೀಂ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ.

ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಶೀಘ್ರದಲ್ಲೇ ತಂಡಕ್ಕೆ ಮರಳುವುದಾಗಿ ಹೇಳಿದ್ದಾರೆ.

ಜಸ್​ಪ್ರೀತ್ ಬುಮ್ರಾ 2022 ರ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಪರವಾಗಿ ಕೊನೆಯ ಬಾರಿ ಕಣಕ್ಕಿಳಿದಿದ್ದರು. ಬಳಿಕ ಬೆನ್ನು ನೋವಿಗೆ ತುತ್ತಾಗಿದ್ದ ಇವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಪ್ರಮುಖ ಟೂರ್ನಿಗಳಾದ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ ಶಿಪ್​ ಫೈನಲ್ ಪಂದ್ಯಗಳಲ್ಲಿ ಜಸ್​ಪ್ರೀತ್ ಬುಮ್ರಾ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 31 ರಿಂದ ಏಷ್ಯಾಕಪ್ 2023 ಶುರುವಾಗಲಿದ್ದು, ಇದರ ಬೆನ್ನಲ್ಲೇ ವಿಶ್ವಕಪ್ ಕೂಡಾ ಶುರುವಾಗಲಿದೆ. ಅದಕ್ಕೂ ಮುನ್ನ ಬುಮ್ರಾ ಸಂಪೂರ್ಣ ಫಿಟ್ ಆಗಿರುವುದು ಹಾಗೂ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್ ಅನ್ನುವುದರಿಂದ ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ.

Also Read  ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ - ಬಿಎಸ್ ಪಿ ಮೈತ್ರಿ

error: Content is protected !!
Scroll to Top