ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.

 

Scroll to Top