ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

Also Read  ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದಡಿಯಲ್ಲಿ ಐವರು ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು.

error: Content is protected !!
Scroll to Top