ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ.





ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.






ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

error: Content is protected !!
Scroll to Top