ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಣಿಪುರ, ಜು. 20. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲೇ, ಒಂದು ದಿನದ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಆತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ತೆಗೆದುಹಾಕುವಂತೆ ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರಕಾರ ಸೂಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

Also Read  ಎ.20ರ ಬಳಿಕ ಲಾಕ್​ಡೌನ್​ ಸಡಿಲಿಕೆ: ಪ್ರಧಾನಿ ಮೋದಿ

error: Content is protected !!
Scroll to Top