ICC ವಿಶ್ವಕಪ್ – 2023- ಬ್ರಾಂಡ್ ಅಂಬಾಸಿಡರ್ ಆಗಿ ಶಾರುಕ್ ಖಾನ್

(ನ್ಯೂಸ್ ಕಡಬ) newskadaba.com ಮುಂಬೈ, ಜು. 20. ಬಾಲಿವುಡ್‌ ನಟ ಶಾರುಖ್ ಖಾನ್ ಅವರನ್ನು ಐಸಿಸಿ ವಿಶ್ವಕಪ್ 2023 ರ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕೆ ಮಾಡಲಾಗಿದೆ.

ಈಗಾಗಲೇ ಶಾರುಖ್ ಖಾನ್ ರವರು ಟ್ರೋಫಿಯೊಂದಿಗೆ ಪೋಟೋವೊಂದಕ್ಕೆ ಪೋಸ್ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ತಾರೆಯ ಚಿತ್ರವನ್ನು ಹಂಚಿಕೊಂಡಿದೆ.


ಭಾರತವು 2023 ರಲ್ಲಿ ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುವ ODI ವಿಶ್ವಕಪ್ ಅನ್ನು ಆಯೋಜಿಸುತ್ತದೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ ಮತ್ತು ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ಪಾಕಿಸ್ತಾನವನ್ನು ಎದುರಿಸಲಿದೆ.

Also Read  ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

error: Content is protected !!
Scroll to Top