ಗೃಹ ಲಕ್ಷ್ಮೀ ಅರ್ಜಿ ಸಲ್ಲಿಸುವ ವಿಧಾನ ಇನ್ನೂ ಸುಲಭ – ಅರ್ಜಿ ಸಲ್ಲಿಕೆ‌ಗೆ ಹೀಗೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.21. ಇಂದಿನಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ವಿಧಾನದಲ್ಲಿ ಬದಲಾವಣೆ ಮಾಡಲಾಗಿದ್ದು, ನಿಮ್ಮ ಸಮೀಪದ ಯಾವುದೇ ಗ್ರಾಮ ಒನ್ ಸೇವಾ ಕೇಂದ್ರ, ಗ್ರಾಮ ವನ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.

ಗುರುವಾರದಂದು ಮೊಬೈಲಿಗೆ ಬಂದ ಮೆಸೇಜಿನಲ್ಲಿ ನಿಗದಿತ ದಿನದಂದು ನಿಗದಿತ ಸಮಯಕ್ಕೆ ಸೂಚಿಸಿದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಆದೇಶ ಹೊರಡಿಸಿತ್ತು. ಗುರುವಾರವ ರಾತ್ರಿ ಈ ಆದೇಶವನ್ನು ರದ್ದು ಮಾಡಲಾಗಿದ್ದು, ಇನ್ನು ಮುಂದೆ ನಿಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಗ್ರಾಮ ಒನ್ ಸೇವಾ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಮಂಗಳೂರು ಒನ್ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Also Read  ನಿಗದಿಪಡಿಸಿದ ವೇಳೆಯಲ್ಲಿ ಅನಿಲ ಟ್ಯಾಂಕರ್ ಗಳ ಸಂಚಾರ ➤ ಜಿಲ್ಲಾಧಿಕಾರಿ ಸೂಚನೆ

ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ರೇಷನ್ ಕಾರ್ಡ್ ಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದ್ದು, ಈ ಕೇಂದ್ರಗಳನ್ನು ಹೊರತು ಪಡಿಸಿ ಬೇರೆ ಕಡೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಸರಕಾರ ಈ ಬಗ್ಗೆ ಯಾವುದೇ ಲಿಂಕ್ ಗಳನ್ನು ಕಳುಹಿಸುವುದಿಲ್ಲ. ಯಾವುದೇ ರೀತಿಯ ನಕಲಿ ಲಿಂಕ್ ಗಳನ್ನು ಕ್ಲಿಕ್ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top