ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ.

ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರದಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

Also Read  14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.!

error: Content is protected !!
Scroll to Top