ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ಮತದಾನ ನಡೆಯಲಿದೆ.

ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು, ಹೋಟೆಲ್‍ಗಳು, ನಾನ್ ಪ್ರೊಪ್ರೈಟರ್ ಗಳಲ್ಲಿ ಹಾಗೂ ಸ್ಟಾರ್ ಹೋಟೆಲ್‍ಗಳಲ್ಲಿ ಮಧ್ಯ ಮಾರಾಟ ಮತ್ತು ಸರಬರಾಜು ಮಾಡುವುದು ನಿಷೇಧಿಸಲಾಗಿರುತ್ತದೆ.

Also Read  ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ

error: Content is protected !!
Scroll to Top