ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ.


ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

Also Read  ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು

ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು, ಹೋಟೆಲ್‍ಗಳು, ನಾನ್ ಪ್ರೊಪ್ರೈಟರ್ ಗಳಲ್ಲಿ ಹಾಗೂ ಸ್ಟಾರ್ ಹೋಟೆಲ್‍ಗಳಲ್ಲಿ ಮಧ್ಯ ಮಾರಾಟ ಮತ್ತು ಸರಬರಾಜು ಮಾಡುವುದು ನಿಷೇಧಿಸಲಾಗಿರುತ್ತದೆ.

error: Content is protected !!
Scroll to Top