ಜು. 26ರಿಂದ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ಆರಂಭ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ನಗರದ ಕೊಡಿಯಾಲ್‍ಬೈಲ್‍ನಲ್ಲಿರುವ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ವಾಣಿಜ್ಯ ಪರೀಕ್ಷೆಗಳು ಜು. 26ರ ವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತ ಅನ್ಶು ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.


ಜು. 21ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ, ಜು.24ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.30ರ ವರೆಗೆ, ಜು. 25ರಂದು ಬೆಳಿಗ್ಗೆ 9ರಿಂದ ಸಂಜೆ 6.15ರ ವರೆಗೆ, ಜು. 26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Also Read  ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top