(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.
ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಮನೆಯಿಂದ ಬ್ಯಾಂಕ್ ಗೆ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿತ್ತು.
