ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ನಡುವೆ ಘಟನೆಯ ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಎನ್ನಲಾಗಿದೆ.

Also Read  ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ

ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ ಕುರಿತು ವರದಿಯಾಗಿತ್ತು.

error: Content is protected !!
Scroll to Top