ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌.


ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.


ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top