ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!



(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.





ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.






ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.

 

error: Content is protected !!
Scroll to Top