ಬಳ್ಳಾರಿಯ ಬಿಜೆಪಿ ಭದ್ರಕೋಟೆಯಲ್ಲಿ ಜೆಡಿಎಸ್ ಪ್ರಾಬಲ್ಯ…? ► ಬಿಜೆಪಿ‌ ಜಿಲ್ಲಾಧ್ಯಕ್ಷ ಸೇರಿ ಹಲವರ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.29. ಬಳ್ಳಾರಿ ಜಿಲ್ಲಾ ಬಿಜೆಪಿಗೆ ಮತ್ತೊಂದು ಬಿಗ್ ಶಾಕ್! ಎರಡು ದಿನಗಳ ಹಿಂದೆಯಷ್ಟೇ ವಿಜಯನಗರ ಶಾಸಕ ಆನಂದ್‍ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ವಿಜಯನಗರ ಬಿಜೆಪಿ ಘಟಕದ ಎಲ್ಲಾ ಮುಖಂಡರು ಇಂದು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವೇಗೌಡರಿಗೆ ಎಲ್ಲಾ ಘಟಕಗಳ ಪದಾಧಿಕಾರಿಗಳು ಇಂದು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳ್ಳಾರಿ ಬಿಜೆಪಿಯ ಭದ್ರ ಕೋಟೆಯಾಗಿತ್ತು. ಆನಂದ್‍ಸಿಂಗ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಭದ್ರಕೋಟೆ ಅಲುಗಾಡತೊಡಗಿದ್ದು, ಈಗ ವಿಜಯನಗರ ಕ್ಷೇತ್ರ ಘಟಕದ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅದರ ಬುಡಕ್ಕೇ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಇದರ ಜೊತೆಗೆ ಕೆಲವು ಪ್ರಮುಖರು ಜೆಡಿಎಸ್ ಕದ ತಟ್ಟುತ್ತಿರುವ ಬಗ್ಗೆ ಮಾಹಿತಿಯಿದ್ದು, ಬಿಜೆಪಿ ಭದ್ರಕೋಟೆಯಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಎನ್ನುವುದು ಸದ್ಯದ ಮಾತಾಗಿದೆ.

Also Read  ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

ಮೊನ್ನೆ ಆನಂದ್‍ಸಿಂಗ್ ಅವರು ರಾಣೆಬೆನ್ನೂರಿನಲ್ಲಿದ್ದ ಸ್ಪೀಕರ್ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಅವರನ್ನು ಬೆಂಬಲಿಸಿ ವಿಜಯನಗರ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳೆಲ್ಲ ಸಾಮೂಹಿಕ ರಾಜೀನಾಮೆ ನೀಡಿರುವುದು ಬಳ್ಳಾರಿ ಬಿಜೆಪಿ ಘಟಕಕ್ಕೆ ತೀವ್ರ ಶಾಕ್ ನೀಡಿದೆ.

error: Content is protected !!