ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ.


ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು ಎನ್ನಲಾಗಿದೆ.

error: Content is protected !!
Scroll to Top