ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ.

ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ ಪಿತೂರಿ ಹೂಡಿದ್ದರು. ಕರಾವಳಿ, ಮಧ್ಯ ಕರ್ನಾಟಕದ ಮೇಲೂ ಶಂಕಿತ ಉಗ್ರರ ವಕ್ರದೃಷ್ಟಿ ಬಿದ್ದಿದೆ. ಕೋಮುಗಲಭೆ ನಡೆಯೋ ಸ್ಥಳಗಳನ್ನೇ ಶಂಕಿತರು ಹೆಚ್ಚು ಟಾರ್ಗೆಟ್ ಮಾಡಿದ್ದರು. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಉಡುಪಿ, ಕಲಬುರಗಿ ಹಾಗೂ ಹುಬ್ಬಳಿಯಂತಹ ಕಡೆ ಟಾರ್ಗೆಟ್ ಮಾಡಿದ್ದರು ಎಂದು ತಿಳಿದುಬಂದಿದೆ.

Also Read  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

 

error: Content is protected !!
Scroll to Top