ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ► ನಿರ್ವಾಹಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.29. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಮೈಸೂರಿನಿಂದ ಕ್ಯಾಲಿಕಟ್ ಹೋಗುತ್ತಿದ್ದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗುಂಡ್ಲುಪೇಟೆಯ ಭೀಮನಬೀಡು ತಲುಪಿದಾಗ. ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್‌ ನ ಆ್ಯಕ್ಸೆಲ್ ಕಟ್ ಆಗಿದ್ದು, ಹೊರಗೆಸೆಯಲ್ಪಟ್ಟ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top