ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ವರದಿ ತಿಳಿಸಿದೆ.


ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ನೀಡಲಾಗಿದೆ. ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ ಸದ್ಯ ಶೋಕಾಸ್ ನೋಟಿಸ್ ನೀಡಿದ್ದು, ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡಿಪಾರು ಆದೇಶ ಮಾಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Also Read  ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

error: Content is protected !!
Scroll to Top