ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್..

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ.

ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದ್ದು, ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನ ಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು, ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದಿದ್ದಾರೆ ಎನ್ನಲಾಗಿದೆ.

Also Read  ಬಾಳಿಲ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ಗೆ ಸಂಪೂರ್ಣ ಭಸ್ಮವಾದ ಬೈಕ್

error: Content is protected !!
Scroll to Top