ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವುದಿಲ್ಲ, ಬದಲಾಗಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಎಚ್‌ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಸ್ತಾಪಿಸಿದ್ದರು. ಬಿಜೆಪಿ ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿತ್ತು. ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಿದ್ದು ಅವರು ಸದನದಿಂದ ಹೊರನಡೆದಾಗ, ನಾವು ಕೂಡ ಅದನ್ನೇ ಅನುಸರಿಸಿದ್ದೇವೆ. ಹಾಗಂತ ಬಿಜೆಪಿ ಜೊತೆ ಜೆಡಿಎಸ್‌ ಕೈ ಜೋಡಿಸಿದೆ ಎಂದರ್ಥವಲ್ಲ ಎಂದರು.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಹೋರಾಡಿದ್ದಕ್ಕೆ ಪಕ್ಷ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಆದ್ದರಿಂದ ಸ್ವತಂತ್ರವಾಗಿ ಲೋಕಸಭಾ ಚುನಾವಣೆಯನ್ನು ಎದುರಿಸೋಣ ಎಂದು ಶಾಸಕರು ಹೇಳಿದ್ದಾರೆ. ಈ ಹಿನ್ನೆಲೆ ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ಜಾತ್ಯಾತೀತ ಜನತಾ ದಳ ನಿರ್ಧರಿಸಿದೆ ಎಂದರು.

error: Content is protected !!

Join the Group

Join WhatsApp Group