ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 21. ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ.


ಆರೋಪಿಯನ್ನು ಅಬ್ದುಲ್‌ ಸಮೀರ್‌ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ ಆರೋಪಿಯು ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದು, ಬಳಿಕ ಮದುವೆಯಾಗುವುದಾಗಿ ನಂಬಿಸಿ 2019ರಲ್ಲಿ ಕನ್ಯಾನ ಗ್ರಾಮದ ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಮದುವೆಯಾಗದೇ ಮೋಸ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Also Read  ನಿರೂಪಕಿ ಅನುಶ್ರೀ ಬಗ್ಗೆ ಬಾಯ್ಬಿಟ್ಟ ನೈಜೀರಿಯಾ ಪ್ರಜೆ ➤ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ

error: Content is protected !!
Scroll to Top