ಬೆಲೆ ಏರಿಕೆ ಬಿಸಿಯಲ್ಲಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್ – ಹಾಲಿನ ದರ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.21. ದಿನ ಬಳಕೆಯ ವಸ್ತುಗಳ ಬೆಲೆ ದಿನೇ ದಿನೇ ಹೆಚ್ಚುತ್ತಿರುವುದರ ನಡುವೆಯೇ ಇದೀಗ ಹಾಲಿನ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟಲಿದ್ದು, ಆಗಸ್ಟ್ 01 ರಿಂದ ಪ್ರತೀ ಲೀಟರ್ ಹಾಲಿನ ಬೆಲೆ ಏರಿಕೆಗೆ ಸರಕಾರವು ನಿರ್ಧರಿಸಿದೆ.

ಪ್ರತಿ ಲೀಟರ್​ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ ಕೆಎಂಎಫ್ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಸಭೆಯಲ್ಲಿ ಲೀಟರ್ ಗೆ 3 ರೂ. ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಆದ್ದರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

Also Read  ಮಂಗಳೂರು: ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದ ಓರ್ವ ಅರೆಸ್ಟ್...!

 

error: Content is protected !!
Scroll to Top