ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ.


ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮುಹಮ್ಮದ್ ಹಫೀಝ್ (20) ಎಂದು ಗುರುತಿಸಲಾಗಿದೆ. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಗುಂಪೊಂದು ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡವೊಂದು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಈ ಕೃತ್ಯ ನಡೆಸಿರುವುದಾಗಿ ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Also Read  ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top