ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಜು.‌ 22. ವೇಶ್ಯಾವಾಟಿಕೆ ನಡೆಸುತಿದ್ದ ಮನೆಗೆ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಮತ್ತೋರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ.


ಬಂಧಿತರನ್ನು ಸಲಾಮತ್ ಮತ್ತು ಚಂದ್ರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ.‌ ಈ ಸಂದರ್ಭದಲ್ಲಿ ಅನೈತಿಕ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Also Read  ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ➤ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಬಂಧಿತರಿಂದ 4 ಮೊಬೈಲ್ ಪೋನ್, 10 ಸಾವಿರ ನಗದು, ಕಾಂಡೊಮ್, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ವೇಶ್ಯಾವಾಟಿಕೆಗೆ ವ್ಯಕ್ತಿಗಳಿಂದ ಹಣ ಸಂಗ್ರಹಿಸಿ ಅನೈತಿಕ ಚಟುವಟಿಕೆಗಳಿಗೆ ಕೊಠಡಿಗಳನ್ನು ಒದಗಿಸಿದ ಆರೋಪದ ಮೇರೆಗೆ ಸಲಾಮತ್ ಮತ್ತು ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದು, ದಾಳಿಯ ಸಮಯದಲ್ಲಿ ಖಾಲಿದ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

error: Content is protected !!
Scroll to Top