(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದು, ಸಂಚಾರಕ್ಕೆ ತೊಡಕುಂಟಾದ ಘಟನೆ ನೇರಳಕಟ್ಟೆ ಎಂಬಲ್ಲಿ ಶನಿವಾರದಂದು ಬೆಳಗ್ಗೆ ನಡೆದಿದೆ.
ಮರದ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ತಂತಿಗಳು ನೆಲದ ಮೇಲೆ ಹರಿದಾಡಿತ್ತು. ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು. ಎರಡೂ ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.