ಮೆಕ್ಯಾನಿಕ್ ಉದ್ಯೋಗ ಹುಡುಕುತ್ತಿದ್ದೀರಾ- ಹಾಗಾದ್ರೆ ಇಂದೇ ಅಪ್ಲೈ ಮಾಡಿ- ಆ. 24 ಲಾಸ್ಟ್ ಡೇಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಅಥವಾ ಐಟಿಐನ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್ ಮೆಷೀನಿಸ್ಟ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಆಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೆರ್ಗಡೆಯಾದ ಅರ್ಹ ಅಭ್ಯರ್ಥಿಗಳು ಜು. 24ರಿಂದ ಆ. 25ರೊಳಗೆ ಮಂಗಳೂರಿನ ಬಿಜೈನಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸಬೇಕು.


ನೇರ ಸಂದರ್ಶನ ಸೆ.11 ರಂದು ಬೆಳಗ್ಗೆ 10ರಿಂದ ನಡೆಯಲಿದ್ದು, ಆಸಕ್ತರು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಈ ಬಗ್ಗೆ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸಲಾಗುವುದು ಎಂದು ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜೀವನದ ಸಮಸ್ಯೆ ಹೆಚ್ಚಾಗಿದೆಯೇ? ನಿಮ್ಮ ರಾಶಿಗನುಗುಣವಾಗಿ ಈ ವಿಶೇಷ ಪರಿಹಾರ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

error: Content is protected !!
Scroll to Top