ವಿರೇಂದ್ರ ಹೆಗ್ಗಡೆ ವಿರುದ್ದ ಆಧಾರ ರಹಿತ ಆರೋಪಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 22. ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಾಡುತ್ತಿರುವ ಆರೋಪಗಳ ಕುರಿತು ನ್ಯಾಯಾಲಯವು ನಿರ್ಬಂಧಕ್ಕೆ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಡಾ| ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಹೇಶ್‌ ಶೆಟ್ಟಿ ತಿಮರೋಡಿ, ಜಗದೀಶ್‌, ಪ್ರಭಾ ಬೆಳಹೊಂಗಳ, ಸೋಮನಾಥ್‌ ನಾಯಕ್‌, ಬಿ.ಎಂ. ಭಟ್‌, ವಿಠಲ್‌ ಗೌಡ ಮತ್ತಿತರರು ಇಲ್ಲದ ಆರೋಪ ಹೊರಿಸಿ ತೇಜೋವಧೆ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

Also Read  ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ


ನ್ಯಾಯಾಲಯವು ಧರ್ಮಸ್ಥಳದ ದೇವಸ್ಥಾನ ಮತ್ತು ಧರ್ಮಾಧಿಕಾರಿ ಡಾ| ಹೆಗ್ಗಡೆಯವರು ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಈ 6 ಜನ ವ್ಯಕ್ತಿಗಳು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿದೆ. ಅಲ್ಲದೇ ಈಗಾಗಲೇ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿರುವ ಅವಹೇಳನಕಾರಿ ವಿಚಾರಗಳನ್ನು ಅಳಿಸಿ ಹಾಕುವಂತೆ ಆದೇಶಿಸಿದೆ.

error: Content is protected !!
Scroll to Top