ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. 545 ಪೊಲೀಸ್‌ ಸಬ್‌ ಇನ್ಸ್ ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ.


ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ. ಈ ತನಿಖಾ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.


ಪಿಎಸ್ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು.

error: Content is protected !!
Scroll to Top