(ನ್ಯೂಸ್ ಕಡಬ) newskadaba.com ಮಂಗಳೂರು, ಜ.29. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ.ಆರ್. ರವಿಕಾಂತೇಗೌಡರವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು.
ಅಡಿಷನಲ್ ಎಸ್ಪಿ ವಿ.ಜೆ. ಸಜತ್ ನೂತನ ಎಸ್ಪಿಯವರನ್ನು ಬರಮಾಡಿಕೊಂಡರು. ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರವಿಕಾಂತೇ ಗೌಡರು, ಪೊಲೀಸ್ ಕೆಲಸ ಎಲ್ಲಾ ಸ್ಥಳಗಳಲ್ಲಿಯೂ ಒಂದೇ ರೀತಿಯಲ್ಲಿರುತ್ತದೆ. ಕೋಮು ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸ್ಥಾಪನೆಗಾಗಿ ಶ್ರಮಿಸಲಾಗುವುದು ಎಂದರು.