ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ.

ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು.

ಪಿಎಸ್ಐ ಅಕ್ರಮ ನ್ಯಾಯಾಂಗ ತನಿಖೆಯ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿನ್ನೆ ಆದೇಶ ಹೊರಡಿಸಿದ್ದೇವೆ. ನ್ಯಾಯಾಧೀಶ ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು ಏಕ ಸದಸ್ಯತ್ವದಲ್ಲಿ ತನಿಖೆ ಆಗಲಿದೆ. ನ್ಯಾಯಾಂಗ ತನಿಖೆ ಆಗಬೇಕು ಎಂದು ಹಿಂದೆ ನಾವೇ ಹೇಳಿದ್ದೆವು. ಸತ್ಯಾಸತ್ಯತೆಗಳನ್ನು ಹೊರಗೆ ತರಬೇಕು ಎಂದು ಹೇಳಿರುವುದಾಗಿ ತಿಳಿಸಿದರು. ನೇಮಕಾತಿಯ ಪ್ರಕ್ರಿಯೆ ಬೇರೆ ಮಾಡುತ್ತೇವೆ. ಇನ್ನೊಂದು ನೇಮಕಾತಿ ಆಗಬೇಕು. 400 ಹುದ್ದೆಗಳು ಖಾಲಿ ಇವೆ. ಅವುಗಳನ್ನು ನೇಮಕ‌ ಮಾಡಬೇಕಾದರೆ ಈ ಪ್ರಕರಣ ಇತ್ಯರ್ಥ ಆಗಬೇಕು ಎಂದರು.

Also Read  ಕೊರೋನಾ ಶಂಕಿತ ಬೆಳ್ಳಾರೆಯ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!! ➤ ಸುಳ್ಳು ಸುದ್ದಿಗೆ ನಲುಗಿದ ಸುಳ್ಯ.!!

error: Content is protected !!
Scroll to Top