(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು.
ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ ಸರಕಾರವು ಆದೇಶಿಸಿತ್ತು. ಜೊತೆಗೆ ಅಣ್ಣಾಮಲೈ ಯವರಿಗೆ ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ವಹಿಸಲಾಯಿತು. ಭದ್ರತಾ ಉಸ್ತುವಾರಿ ವಹಿಸಿದ ಕೆಲವೇ ಗಂಟೆಗಳಲ್ಲಿ ಜಿಲ್ಲೆಗೆ ಆಗಮಿಸಿದ ಅಣ್ಣಾಮಲೈ ರವರಲ್ಲಿ ಹೊಸ ನಿರೀಕ್ಷೆಯನ್ನು ಜಿಲ್ಲೆಯ ಜನತೆ ಎದುರು ನೋಡುತ್ತಿದೆ.