ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ.

ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಒಟ್ಟು 14 ಮಂದಿಯನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Also Read  2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು

ಮೇಲ್ಛಾವಣಿಯು ಕಳಪೆ ಕಾಮಗಾರಿಯಿಂದ ಕೂಡಿರುವ ಹಿನ್ನೆಲೆ ಭಾರೀ ಮಳೆ ಬಿದ್ದಾಗ ಛಾವಣಿ ಕುಸಿದಿದ್ದು, ಹೀಗಾಗಿ ಕಟ್ಟಡ ನಿರ್ಮಾಣ ಮಾಡಿದ ಉಸ್ತುವಾರಿಯನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

error: Content is protected !!
Scroll to Top