ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ.






ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ.







ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

error: Content is protected !!
Scroll to Top