ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ.


ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ ಶಿಕ್ಷಣ ಪಡೆಯುವಂತೆ ಮತ್ತು ಶಿಕ್ಷಣ ಪಡೆದವರು ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡಬೇಕು. ಸರಕಾರದಿಂದ ದೊರೆಯುವ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ಪ್ರಯತ್ನ ಮಾಡುವಂತೆ ಹೇಳಿದರು ಎನ್ನಲಾಗಿದೆ.

error: Content is protected !!