ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 24. ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರು ಜಲಪಾತಕ್ಕೆ ಆಗಮಿಸಿದ್ದ ಯುವಕನೋರ್ವ ಕಾಲು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಕೊಲ್ಲೂರು ಸನೀಪದ ಅರಶಿನ ಗುಂಡಿ ಜಲಪಾತದಲ್ಲಿ ರವಿವಾರದಂದು ನಡೆದಿದೆ.

ನೀರುಪಾಲಾದ ಯುವಕನನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ಎಂದು ಗುರುತಿಸಲಾಗಿದೆ. ಶರತ್ ಆತನ ಸ್ನೇಹಿತ ಗುರುರಾಜ ಎಂಬಾತನೊಂದಿಗೆ ಭದ್ರಾವತಿಯಿಂದ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ (ಫಾಲ್ಸ್) ನೋಡಲು ಹೋಗಿದ್ದು ಅಪರಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯೊಂದನ್ನು ಏರಿ ಅದರ ಅಂಚಿನಲ್ಲಿ ನಿಂತಿದ್ದ ಶರತ್, ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ಸೌಪರ್ಣಿಕ ನದಿಗೆ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಶರತ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಯುವಕ ಶರತ್ ಕಾಲು ಜಾರಿ ಬೀಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group