(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಸುರೇಶ್ ಕಾಂಗ್ರೆಸ್-ಜೆಡಿಎಸ್ ಮೃತ್ರಿ ಸರ್ಕಾರದ ಪತನಕ್ಕೆ ಕಾರಣಕರ್ತರಾಗಿದ್ದವರಲ್ಲಿ ಓರ್ವರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನಗೆ ದೊಡ್ಡ ಶಾಕ್ ನೀಡಿದ್ದಾರೆ.
ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾರ್ಯ ಪ್ರವೃತ್ತರಾಗಿರುವ ಡಿಕೆ ಬ್ರದರ್ಸ್, ಕಾಂಗ್ರೆಸ್ನಿಂದ ದೂರ ಉಳಿದವರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದರ ಫಲವಾಗಿ ಶಾಸಕ ಮುನಿರತ್ನ, ಮಾಜಿ ಬಿಬಿಎಂಪಿ ಸದಸ್ಯರುಗಳಾದ ವೇಲು ನಾಯ್ಕರ್, ಮೋಹನ್ ಕುಮಾರ್ ಹಾಗೂ ಶ್ರೀನಿವಾಸ ಮೂರ್ತಿ ಯವರು ಬಿಜೆಪಿ ತೊರೆದು ಭಾನುವಾರದಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ವರದಿಯಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ KGFನಿಂದ ಮಾಜಿ ಬಿಬಿಎಂಪಿ ಸದಸ್ಯ ವೇಲು ನಾಯ್ಕರ್ ಟಿಕೆಟ್ ಕೇಳಿದ್ದರು. ಆದರೆ, ಟಿಕೆಟ್ ಸಿಗದೆ ಅತೃಪ್ತರಾಗಿದ್ದ ವೇಲು ನಾಯ್ಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.