(ನ್ಯೂಸ್ ಕಡಬ) newskadaba.com ಪುತ್ತೂರು, ಜು. 24. ಕರಾವಳಿಯಲ್ಲಿ ರಣಭೀಕರ ಮಳೆಯಾಗುತ್ತಿದ್ದು ಕಡಲು ಪ್ರಕ್ಷುಬ್ದವಾಗಿದೆ. ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಸಂಪರ್ಕ ಕಡಿತವಾಗಿದೆ. ಅದೇರೀತಿ ಕುಮಾರಧಾರ ಸ್ನಾನಘಟ್ಟದ ಬಳಿ ಕುಮಾರಧಾರ ನೀರು ರಸ್ತೆಯನ್ನು ಆವರಿಸಿಕೊಂಡಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯ ಮಟ್ಟಕ್ಕೆತಲುಪಿದೆ. ಕೊಲ್ಲಮೊಗರಿನ ಕಡಮಕಲ್ಲು ಎಂಬಲ್ಲಿ ಸೇತುವೆಯ ತಡೆಗೋಡೆ ನೀರುಪಾಲಾಗಿದೆ.
ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ
