ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..!

(ನ್ಯೂಸ್ ಕಡಬ) newskadaba.com ಹಾಸನ, ಜು. 24. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ಬಿಸಿಲೆ‌ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ‌ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಮರ ಬಿದ್ದು ಕೆಲಕಾಲ ಸಂಚಾರ ಸ್ಥಗಿತವಾಗಿತ್ತು. ಇದೀಗ ಗುಡ್ಡ ಕುಸಿದು ಮತ್ತೆ ಸಂಪರ್ಕ ಸ್ಥಗಿತವಾಗಿದೆ. ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗೆಯೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Also Read  ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

error: Content is protected !!
Scroll to Top